Politics

*ಬ್ಲಾಕ್ ಮೇಲ್ ಪ್ರಕರಣ: ಆರೋಪಿ ಮಹಿಳೆ ಮಂಜುಳಾ ಹಾಗೂ ಆಕೆಯ ಪತಿಯನ್ನು ಕಸ್ಟಡಿಗೆ ಪಡೆದ ಸಿಸಿಬಿ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವರ ಪುತ್ರನಿಗೆ ಬ್ಲಾಕ್ ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಲಪಾಡ್ ಬ್ರಿಗೇಡ್ ಅಧ್ಯಕ್ಷೆ ಮಂಜುಳಾ ಪಾಟೀಲ್ ಹಾಗೂ ಆಕೆಯ ಪತಿ ಶಿವರಾಜ್ ಪಾಟೀಲ್ ನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದಾರೆ.

ಮಾಜಿ ಸಚಿವ ಪುತ್ರನಿಗೆ ವಾಟ್ಸಪ್ ಮೆಸೇಜ್, ಅಶ್ಲೀಲ ಸಂದೇಶ ರವಾನೆ, ವಿಡಿಯೋ ಕಾಲ್ ಮಾಡಿದ್ದ ಆರೋಪಿ ಮಹಿಳೆ ಮಂಜುಳಾ ಪಾಟೀಲ್ ಬಳಿಕ 20 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದಳು. ಮಾಜಿ ಸಚಿವರ ಪುತ್ರ ನೀಡಿದ ದೂರಿನ ಹಿನ್ನೆಲೆಯಲ್ಲಿ ಮಂಜುಳಾ ಪಾಟೀಲ್ ಹಾಗೂ ಆಕೆಯ ಪತಿ ಶಿವರಾಜ್ ಪಾಟೀಲ್ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

Home add -Advt

ಆರೋಪಿಗಳ ಹೆಚ್ಚಿನ ವಿಚಾರಣೆ ನಡೆಸುವ ನಿಟ್ಟಿನಲ್ಲಿ ಸಿಸಿಬಿ ಪೊಲೀಸರು 8 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ. ಇಬ್ಬರ ಮೊಬೈಲ್ ಫೋನ್ ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ.


Related Articles

Back to top button