LatestUncategorized

*ಈ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ; ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದಿನಿಂದ ಜೂನ್ 15 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Home add -Advt

ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯು ಗಂಟೆಗೆ 40-50 ಕೀ.ಮೀ ವೇಗದಲ್ಲಿ ಬೀಸಲಿದೆ ಎಂದು ಎಚ್ಚರಿಕೆ ನೀಡಿದೆ.

Related Articles

Back to top button