Karnataka NewsLatest

*ಮಹಿಳೆ ಅನುಮಾನಾಸ್ಪದ ಸಾವು: ರೊಚ್ಚಿಗೆದ್ದ ಸಂಬಂಧಿಕರಿಂದ ಪತಿಯ ಮನೆಗೆ ಬೆಂಕಿ; ಆತ್ಮಹತ್ಯೆಗೆ ಶರಣಾದ ಗಂಡ*

ಪ್ರಗತಿವಾಹಿನಿ ಸುದ್ದಿ: ಮಹಿಳೆಯೊಬ್ಬರ ಶವ ಮನೆಯಲ್ಲಿಯೇ ನೇಣು ಬಿಗಿದ ಸ್ಥತಿಯಲ್ಲಿ ಪತ್ತೆಯಾಗಿದ್ದು, ಪತಿ ಹಾಗೂ ಕುಟುಂಬದವರೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಸಂಬಂಧಿಕರು ಪತಿಯ ಮನೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಗೆದ್ದೆಹೊಸೂರಿನ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸ್ವಾತಿ (21) ಎಂಬ ಮಹಿಳೆ ಮನೆಯಲ್ಲಿಯೇ ಶವವಾಗಿ ಪತ್ತೆಯಾಗಿದ್ದಾರೆ. ಪತಿ ಮೋಹನ್ ಹಾಗೂ ಕುಟುಂಬದವರು ಕಿರುಕುಳ ಹಿಂದ್ಸೆ ನೀಡಿ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಲು ಹೊರಟಿದ್ದಾರೆ ಎಂದು ಆರೋಪಿಸಿ ಸ್ವಾತಿ ಮನೆಯವರು ಹಾಗೂ ಸಂಬಂಧಿಕರು ಮೋಹನ್ ಮನೆ ಮೇಲೆ ದಾಳಿ ನಡೆಸಿದ್ದಾರೆ.

Home add -Advt

ಮನೆ ಪೀಠೋಪಕರಣ ಧ್ವಂಸ ಮಾಡಿ ಬೆಂಕಿ ಹಚ್ಚಿದ್ದಾರೆ. ಅಲ್ಲದೇ ಮನೆ ಬಳಿಯ ಕೊಬ್ಬರಿ ಘಟಕವನ್ನು ಧ್ವಂಸ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಬಂಧಿಕರ ಆಕ್ರೋಶ ತೀವ್ರಸ್ವರೂಪ ಪಡೆಯುತ್ತಿದ್ದಂತೆ ಮನೆಯಿಂದ ಎಸ್ಕೇಪ್ ಆದ ಸ್ವಾತಿ ಪತಿ ಮೋಹನ್, ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ತನಿಖೆ ನಡೆಸಿದ್ದಾರೆ.


Related Articles

Back to top button