Kannada NewsKarnataka NewsPolitics

*36 ವೀರಶೈವ ಲಿಂಗಾಯತ ಶಾಸಕರಿದ್ದು, ಪ್ರಾತಿನಿಧ್ಯ ಲಭಿಸುತ್ತದೆ: ಈಶ್ವರ ಖಂಡ್ರೆ*

ಪ್ರಗತಿವಾಹಿನಿ ಸುದ್ದಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ 36 ವೀರಶೈವ ಲಿಂಗಾಯತ ಶಾಸಕರು ಗೆದ್ದಿದ್ದು, ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ಲಭಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಲಿಂಗಾಯತ, ವೀರಶೈವರೂ ಸೇರಿದಂತೆ ಎಲ್ಲ ಸಮುದಾಯದವರೂ ಬೆಂಬಲ ನೀಡಿದ್ದಾರೆ. ಸರ್ವರಿಗೂ ಸಮಪಾಲು ಪಕ್ಷದ ಸಿದ್ಧಾಂತವಾಗಿದ್ದು ವರಿಷ್ಠರು, ಮುಖ್ಯಮಂತ್ರಿಗಳು ಸಂಪುಟ ವಿಸ್ತರಣೆಯಲ್ಲಿ ಸೂಕ್ತ ಪ್ರಾತಿನಿಧ್ಯ ನೀಡುವರೆಂದರು.

Home add -Advt

ಸಿದ್ದರಾಮಯ್ಯ ಮತ್ತೆ ಸ್ಪರ್ಧಿಸಲಿ:

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜಕೀಯ ನಿವೃತ್ತಿಯ ಮಾತನಾಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಈಶ್ವರ ಖಂಡ್ರೆ, ಅವರು ಮತ್ತೆ ಸ್ಪರ್ಧಿಸಬೇಕು, ಶಾಸಕರಾಗಿ ನಮ್ಮೆಲ್ಲರಿಗೂ ಮಾರ್ಗದರ್ಶನ ಮಾಡಬೇಕು ಎಂಬುದು ಕಾರ್ಯಕರ್ತರೆಲ್ಲರ ಆಶಯವಾಗಿದೆ ಎಂದರು.

Related Articles

Back to top button