Kannada NewsKarnataka NewsLatest

*ನಟ ದರ್ಶನ್ ನ ಮೂವರು ಅಭಿಮಾನಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಫ್ಯಾನ್ಸ್ ಗ್ಯಾಂಗ್ ವೊಂದು ಸಾಕ್ಷಿದಾರರಿಗೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಪ್ರಕರಣದ ಪ್ರಮುಖ ಸಾಕ್ಷಿದಾರ ಸಂದೀಪ್ ಅವರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ದರ್ಶನ್ ಅಭಿಮಾನಿಗಳಾದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಪುನೀತ್, ವೇಣು ಮತ್ತು ಸುಹಾಸ್ ಬಂಧಿತ ಆರೋಪಿಗಳು.

Home add -Advt

ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದಾರ ಸಂದೀಪ್ ಅವರು ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನನ್ವಯ ಕಾರ್ಯಪ್ರವೃತ್ತರಾದ ಪೊಲೀಸರು, ಸಂದೀಪ್ ಅವರಿಗೆ ಸಾಕ್ಷಿ ನುಡಿಯದಂತೆ ಬೆದರಿಕೆ ಹಾಕಿದ್ದ ಪುನೀತ್, ವೇಣು, ಸುಹಾಸ್ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಪುನೀತ್, ದರ್ಶನ್ ಫ್ಯಾನ್ ಪೇಜ್ ‘ಡಿ ಕಂಪನಿ’ಯ ಅಡ್ಮಿನ್ ಆಗಿದ್ದ. ರೇಣುಕಾಸ್ವಾಮಿ ಕೊಲೆ ಪ್ರಕರಣದ ನ್ಯಾಯಯುತ ತನಿಖೆಗೆ ಅಡ್ಡಿಪಡಿಸುವ ಪ್ರಯತ್ನ ಇದಾಗಿದೆ ಎಂದು ಹೇಳಲಾಗಿದೆ.


Related Articles

Back to top button