Latest

ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಡ್ರಾಪ್ ಕೊಡುವ ನೆಪದಲ್ಲಿ ಒಂಟಿ ಮಹಿಳೆ ಮೇಲೆ ಪೈಶಾಚಿಕ ಕೃತ್ಯ ನಡೆಸಿರುವ ಘಟನೆ ಕಲಬುರ್ಗಿಯಲ್ಲಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ನಾಗರಾಜ್ ಎಂದು ಗುರುತಿಸಲಾಗಿದೆ. ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಸಾರಿಗೆ ಸಂಚಾರ ಸ್ಥಗಿತಗೊಂಡಿತ್ತು. ಸರ್ಕಾರಿ ಕಚೇರಿ ಕಂಪ್ಯೂಟರ್ ಆಪರೇಟರ್ ಆಗಿದ್ದ ಮಹಿಳೆ ಕೆಲಸ ಮುಗಿಸಿ ಮನೆ ಕಡೆ ಹೊರಟಿದ್ದರು. ಬಸ್ ಗಾಗಿ ಕಾಯುತ್ತಿದ್ದ ಮಹಿಳೆಯನ್ನು ಕಂಡು ಡ್ರಾಪ್ ಕೊಡುವುದಾಗಿ ನಾಗರಾಜ್ ಹೇಳಿದ್ದ. ಈತನ ಮಾತು ನಂಬಿ ಬೈಕ್ ಹತ್ತಿದ್ದ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾನೆ.

Home add -Advt

ಮಾರ್ಗಮಧ್ಯೆ ಬೈಕ್ ನಿಲ್ಲಿಸಿ ಮಹಿಳೆಯನ್ನು ಬಲವಂತದಿಂದ ಎಳೆದೊಯ್ದು ಅತ್ಯಾಚಾರವೆಸಗಿದ್ದಾನೆ. ಆಘಾತಕ್ಕೊಳಗಾದ ಮಹಿಳೆ ಮಾನಸಿಕವಾಗಿ ಜರ್ಜರಿತಗೊಂಡಿದ್ದರು. ಇದೀಗ ಕುರುಕುಂಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಆರೋಪಿ ನಾಗರಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ.

 

Related Articles

Back to top button