LatestNational

*ಮತ್ತೊಂದು ಭೀಕರ ಅಪಘಾತ: ಐವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಟ್ರಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಕಾಲೇಜು ವಿದ್ಯಾರ್ಥಿಗಲು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ತಿರುತ್ತಣಿಯಲ್ಲಿ ಸಂಭವಿಸಿದೆ.

ಏಳು ಜನರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ತಿರುತ್ತಣಿ ಬಳಿ ಚೆನ್ನೈ-ತಿರುಪತಿ ಹೆದ್ದಾರಿಯಲ್ಲಿ ಕಾರು ಹಾಗೂ ಟ್ರಕ್ ನಡುವೆ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

Home add -Advt

ಕನಗಮ್ಮಛತ್ರಂ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದ್ದಾರೆ. ಅಪಘಾತದಲ್ಲಿ ಕಾರು ನುಜ್ಜುಗುಜ್ಜಾಗಿದ್ದು, ಮೃತದೇಹಗಳನ್ನು ಹೊರತೆಗೆಯುವುದೇ ಕಷ್ಟದ ಕೆಲಸವಾಗಿದೆ. ಇಬ್ಬರು ಗಾಯಾಳುಗಳನ್ನು ತಿರುವಳ್ಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟ್ರಕ್ ಚಾಲಕನನ್ನು ಬಂಧಿಸಲಾಗಿದೆ. ಅಪಘಾತದಲ್ಲಿ ಮೃತಪಟ್ಟ ಐವರು ವಿದ್ಯಾರ್ಥಿಗಳು ಓಂಗಲ್ ಮೂಲದವರೆಂದು ತಿಳಿದುಬಂದಿದೆ.

Related Articles

Back to top button