Kannada NewsKarnataka NewsLatest
*ಹುಲಿ ಉಗುರು ಪ್ರಕರಣ: ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ಜಾಮೀನು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ಹಿನ್ನೆಲೆಯಲ್ಲಿ ಬಂಧನಕ್ಕೀಡಾಗಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಬೆಂಗಳೂರಿನ 2ನೇ ಎಸಿಎಂಎಂ ನ್ಯಾಯಾಲಯ ವರ್ತೂರು ಸಂತೋಷ್ ಅವರಿಗೆ ಜಾಮೀನು ಮಂಜೂರು ಮಾಡಿದ್ದು, ನಾಲ್ಕು ಸಾವಿರ ರೂಪಾಯಿ ನಗದು ಭದ್ರತೆ ಅಥವಾ ಒಬ್ಬರ ಶ್ಯೂರಿಟಿ ಒದಗಿಸುವಂತೆ ಷರತ್ತು ವಿಧಿಸಿದೆ.
ಜಾಮೀನು ಮಂಜೂರು ಆಗಿರುವ ಹಿನ್ನೆಲೆಯಲ್ಲಿ ವರ್ತೂರು ಸಂತೋಷ್ ಇಂದು ಸಂಜೆ ವೇಳೆಗೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಬಿಡುಗಡೆ ಬಳಿಕ ವರ್ತೂರು ದ್ಸಂತೋಷ್ ಮತ್ತೆ ಬಿಗ್ ಬಾಸ್ ಮನೆಗೆ ಹೋಗುತ್ತಾರಾ? ಎಂಬುದನ್ನು ಕಾದುನೋಡಬೇಕಿದೆ.




