Karnataka News

*ಪಾಠ ಕೇಳುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದ ಬಾಲಕ: ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣ ಹೆಚ್ಚುತ್ತಿದೆ. ಇಲ್ಲೋರ್ವ 8ನೇ ತರಗತಿ ವಿದ್ಯಾರ್ಥಿ ಲೋ ಬಿಪಿಯಿಂದ ಕುಸಿದು ಬಿದ್ದವನು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಯಚೂರಿನ ಸಿರವಾರ ಪಟ್ಟಣದ ಅತ್ತನೂರು ಗ್ರಾಮದ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದೆ. 8ನೇ ತರಗತಿ ವಿದ್ಯಾರ್ಥಿ 13 ವರ್ಷದ ತರುಣ್ ಅತ್ತನೂರು ಎಂದಿನಂತೆ ಇಂದು ಶಾಲೆಗೆ ಬಂದವನು ತರಗತಿಯಲ್ಲಿ ಪಾಠ ಕೇಳುತ್ತಿದ್ದ. ಈ ವೇಳೆ ತಲೆಸುತ್ತು ಬರುತ್ತಿದೆ ಎನ್ನುತ್ತಿದ್ದವನೇ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನು ಶಿಕ್ಷಕರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಹೆಚ್ಚಿನ ಚಿಕಿತ್ಸೆಗೆಂದು ರಾಯಚೂರಿಗೆ ಕರೆದೊಯ್ಯುತ್ತಿದ್ದ ವೇಳೆ ಮಾರ್ಗ ಮಧ್ಯೆಯೇ ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.

ಸಿರಿವಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button