Latest

*ರೈಲಿಗೆ ಸಿಲುಕಿ ಕಾಲೇಜು ವಿದ್ಯಾರ್ಥಿನಿ ಸಾವು*

ಪ್ರಗತಿವಾಹಿನಿ ಸುದ್ದಿ: ರೈಲಿಗೆ ಸಿಲುಕಿ ಕಾಲೇಜು ವಿದ್ಯಾರ್ಥಿನಿ ಸಾವಿಗಿಡಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.‌

ತುಮಕೂರು ಜಿಲ್ಲೆ ತಿಪಟೂರು ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.‌ ವರ್ಷಿಣಿ ಟಿ ಎಸ್ (19) ಮೃತ ದುರ್ದೈವಿಯಾಗಿದ್ದು, ನಗರದ ಕಲ್ಪತರು ಕಾಲೇಜಿನಲ್ಲಿ ಬಿ ಎ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ.‌ ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ದೇವರಹಳ್ಳಿ ನಿವಾಸಿ ಸುರೇಶ್ ಎಂಬುವರ ಪುತ್ರಿಯಾಗಿರುವ ವರ್ಷಿಣಿ, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.‌ ಸ್ಥಳಕ್ಕೆ ಅರಸೀಕೆರೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button