*ಬೆಳಗಾವಿ ನಗರಾಭಿವೃದ್ಧಿ=ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ: 6 ಕೆಜಿ ಚಿನ್ನ,5 ಕೆಜಿ ಬೆಳ್ಳಿ ಸೇರಿ ಬರೋಬ್ಬರಿ 14 ಕೋಟಿ ಅಕ್ರಮ ಆಸ್ತಿ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅಜಯಸಿಂಗ್ ರಜಪೂತ್ ಮನೆ ಮೇಲೆ ನಡೆದಿದ್ದ ಲೋಕಾಯುಕ್ತ ಅಧಿಕಾರಿಗಳ ದಾಳಿ ಅಂತ್ಯಗೊಂಡಿದೆ.
ದಾಳಿ ವೇಳೆ ಅಜಯ್ ಸಿಂಗ್ ರಜಪೂತ್ ನಿವಾಸ ಹಾಗೂ ಕಚೇರಿಗಳಲ್ಲಿ ಬರೋಬ್ಬರಿ 14 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಕ್ರಮ ಆಸ್ತಿ ಪತ್ತೆಯಾಗಿದೆ. ಅಧಿಕಾರಿಗಳೇ ಬಿಚ್ಚಿ ಬಿದ್ದಿದ್ದಾರೆ.
ಬೆಳಗಾವಿಯ ಆಂಜನೇಯ ನಗರ ಸೇರಿದಂತೆ ಒಟ್ಟು ಏಳು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿತ್ತು. ಈ ವೇಳೆ 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ ಆಭರಣಗಳು ಪತ್ತೆಯಾಗಿವೆ. ಇದಲ್ಲದೆ 3.12 ಕೋಟಿ ರೂಪಾಯಿ ಬ್ಯಾಂಕ್ ಡೆಪಾಸಿಟ್ ಇಟ್ಟಿರುವುದು ಬೆಳಕಿಗೆ ಬಂದಿದೆ. ಸವದತ್ತಿ, ಹುಕ್ಕೇರಿ ಹಾಗೂ ಹುಬ್ಬಳ್ಳಿಯ ವಿವಿಧೆಡೆ ಒಟ್ಟು 18 ನಿವೇಶನಗಳನ್ನು ಅಜಯಸಿಂಗ್ ಖರೀದಿಸಿರುವುದು ದಾಖಲೆಗಳಿಂದ ಸಾಬೀತಾಗಿದೆ. ಮನೆಯಲ್ಲಿ ಐಷಾರಾಮಿ ಕಾರುಗಳು ಮತ್ತು ಬೈಕ್ಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




