Latest

ಐಎಂಎ ವಂಚನೆ ಪ್ರಕರಣ; ಮನ್ಸೂರ್ ಖಾನ್ ಸಿಬಿಐ ಕಸ್ಟಡಿಗೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಐಎಂಎಯಿಂದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮನ್ಸೂರ್ ಅಲಿಖಾನ್ ನನ್ನು ಸಿಬಿಐ ವಶಕ್ಕೆ ನೀಡಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಐಎಂಎ ವಂಚನೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ನನ್ನು ಸಿಬಿಐ ಅಧಿಕಾರಿಗಳು ಇಂದು ಬೆಂಗಳೂರು ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು. ಮಾಜಿ ಸಚಿವ ರೋಷನ್ ಬೇಗ್ ಅವರ ಬಂಧನದ ಬೆನ್ನಲ್ಲೇ ಮನ್ಸೂರ್ ಖಾನ್ ನನ್ನು ಇನ್ನಷ್ಟು ವಿಚಾರಣೆಗೊಳಪಡಿಸಲು ತನ್ನ ಕಸ್ಟಡಿಗೆ ನೀಡುವಂತೆ ಕೋರಿದ್ದರು.

Home add -Advt

ಈ ಹಿನ್ನೆಲೆಯಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ನವೆಂಬರ್ 27ರವರೆಗೆ ಮನ್ಸೂರ್ ಖಾನ್ ನನ್ನು ಸಿಬಿಐ ಕಸ್ಟಡಿಗೆ ವಹಿಸಿ ಆದೇಶ ನೀಡಿದೆ.

Related Articles

Back to top button