Latest

ಹೃದಯಾಘಾತಕ್ಕೀಡಾಗಿದ್ದ ಖ್ಯಾತ ಹಾಸ್ಯ ನಟ ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿ; ಚೆನ್ನೈ: ತಮಿಳು ಖ್ಯಾತ ಹಾಸ್ಯ ನಟ ವಿವೇಕ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು.

ವಿವೇಕ್ ಗೆ ನಿನ್ನೆ ಹೃದಯಾಘಾತವಾಗಿತ್ತು. ಅವರನ್ನು ಚೆನ್ನೈ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಮೃತಪಟ್ಟಿದ್ದಾರೆ.

Home add -Advt

ವಿವೇಕ್ ಗೆ ನಿನ್ನೆ ಆಂಜಿಯಾಪ್ಲಾಸ್ಟಿ ಶಸ್ರಚಿಕಿತ್ಸೆ ನಡೆಸಲಾಗಿತ್ತು. ಬಳಿಕ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿತ್ತು. ಕಾರ್ಡಿಯೋಜೆನಿಕ್ ನಿಂದ ತೀವ್ರ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿರುವುದಾಗಿ ವೈದ್ಯ ಡಾ.ರಾಜು ಶಿವಸ್ವಾಮಿ ತಿಳಿಸಿದ್ದಾರೆ.

ಎರಡು ದಿನಗಳ ಹಿಂದೆಯಷ್ಟೇ ಕೋವಿಡ್ ಲಸಿಕೆ ಪಡೆದಿದ್ದ ವಿವೇಕ್, ಎಲ್ಲರೂ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡಿದ್ದರು.

Related Articles

Back to top button