Belagavi NewsBelgaum NewsKannada NewsKarnataka News

*ಇಂದು ಯಾವ ಜಿಲ್ಲೆಗಳಲ್ಲಿ ಮಳೆ: ಇಲ್ಲಿದೆ ಸಂಪೂರ್ಣ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ ಸೇರಿದಂತೆ ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ವರದಿಯಂತೆ, ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಕೊಡಗು, ಕೋಲಾರ, ಕೊಪ್ಪಳ, ರಾಯಚೂರು, ಚಾಮರಾಜನಗರ, ಚಿಕ್ಕಮಗಳೂರು, ಮಂಡ್ಯ ಮೈಸೂರು, ರಾಮನಗರ,ಗದಗ, ಹಾವೇರಿ, ಹಾಸನ, ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

ಇನ್ನು ತುಮಕೂರು, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯಪುರ, ಯಾದಗಿರಿ, ಕಲಬುರಗಿ, ಬೀದ‌ರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಒಣಹವೆ ಇರಲಿದೆ. 

ಈಗಾಗಲೇ 25 ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಿದ್ದು, 3 ಜಿಲ್ಲೆಗಳಲ್ಲಿ ಸಾಮಾನ್ಯ ಒಂದು ಜಿಲ್ಲೆಯಲ್ಲಿ ಅತಿ ಕಡಿಮೆ ಮತ್ತು ಒಂದು ಜಿಲ್ಲೆಯಲ್ಲಿ ಇನ್ನೂ ಮಳೆಯಾಗಿಲ್ಲ. ಈ ಹಿಂದೆ ಹವಾಮಾನ ಇಲಾಖೆ ಏಪ್ರಿಲ್ 12 ರಿಂದ 18ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿತ್ತು. 

ಬೆಂಗಳೂರು ನಗರ ಸೇರಿ 15 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾದ್ಯತೆ ಇದೆ ಎಂದು ತಿಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button