Kannada NewsLatest

ಮುದನೂರು ಶಾಲೆ ದುರಸ್ತಿ ಆರಂಭ: 20 ಲಕ್ಷ ರೂ ಮಂಜೂರು

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಮದುರ್ಗ ತಾಲ್ಲೂಕಿನ ಮುದನೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದುರಸ್ತಿಗಾಗಿ 20 ಲಕ್ಷ ರೂಪಾಯಿ ಅನುದಾನವನ್ನು ಮಂಜೂರು ಮಾಡಲಾಗಿದೆ.

ಪ್ರಸಕ್ತ ಸಾಲಿನ ಕ್ರಿಯಾಯೋಜನೆಯಡಿ ಯೋಜನೆಯನ್ನು ಅಳವಡಿಸಿಕೊಂಡು ದುರಸ್ತಿ ಕಾಮಗಾರಿ ಇಂದಿನಿಂದಲೇ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯತ 10 ಲಕ್ಷ ರೂಪಾಯಿ ತಾಲ್ಲೂಕು ಪಂಚಾಯತ 5 ಲಕ್ಷ ರೂಪಾಯಿ ಹಾಗೂ ಗ್ರಾಮ ಪಂಚಾಯತಿ ವತಿಯಿಂದ 5 ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ತಹಶೀಲ್ದಾರ, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಆರಂಭಿಸಿದ್ದಾರೆ.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಅವರು ಹಾಗೂ ತಾವು ಕಾಮಗಾರಿಯ ಕುರಿತು ನಿರಂತರವಾಗಿ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.
ಕನ್ನಡ ಕಿರುತೆರೆ ನಟಿ ಚೇತನಾ ರಾಜ್ ಆಸ್ಪತ್ರೆಯಲ್ಲಿ ಸಾವು

Related Articles

Back to top button