National

*ಉಗ್ರರ ಜೊತೆ ಸಂಪರ್ಕ ಹೊಂದಿದ್ದವರ ಮನೆಗಳ ಮೇಲೆ ದಾಳಿ*

ಪ್ರಗತಿವಾಹಿನಿ ಸುದ್ದಿ: ಭಾರತ-ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾಗಿದೆಯಾದರೂ ಪಾಕಿಸ್ತಾನದಿಂದ ಮತ್ತೆ ಗುಂಡಿನ ದಾಳಿ ಸುದ್ದಿ ವರದಿಯಾಗುತ್ತಿದೆ. ಈ ನಡುವೆ ದೇಶದಾದ್ಯಂತ ಕಟ್ಟೆಚ್ಚರ ಮುಂದುವರೆಸಲಾಗಿದೆ.

ಇದೇ ವೇಳೆ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಜೊತೆ ಸಂಪರ್ಕ ಹೊಂದಿದ್ದವರ ಮನೆಗಳ ಮೇಲೆ ದಾಳಿ ನಡೆದಿದೆ. ಜಮ್ಮು-ಕಾಶ್ಮೀರ ತನಿಖಾ ತಡಗಳಿಂದ ಉಗ್ರರ ಸಂಪರ್ಕದಲ್ಲಿರುವವರ ನಿವಾಸಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

ದಕ್ಷಿಣ ಕಾಶ್ಮೀರದ ಹಲವರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಶೋಫಿಯಾನ್, ಕುಲ್ಗಾಮ್, ಪುಲ್ವಾಮ, ಅನಂತನಾಗ್ ನಲ್ಲಿ ತನಿಖಾ ತಂಡ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button