Belagavi NewsBelgaum News

*ಹೆದ್ದಾರಿಯಲ್ಲಿ ಕಾರಿನ ಸಮೇತ ಸುಟ್ಟು ಕರಕಲಾದ ವ್ಯಕ್ತಿಯ ಶವ ಪತ್ತೆ: ಬೆಚ್ಚಿ ಬಿದ್ದ ಬೆಳಗಾವಿ ಜನತೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಬಳಿ ಘೋರ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬರು ಕಾರಿನ ಸಮೇತ ಸುಟ್ಟು ಕರಕಲಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಚಿಕ್ಕೋಡಿ ತಾಲೂಕಿನ ಜೈನಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ಬಳಿ ಸುಟ್ಟು ಕರಕಲಾಗಿರುವ ರೀತಿಯಲ್ಲಿ ಕಾರು ಪತ್ತೆಯಾಗಿದ್ದು, ಕಾರಿನೊಳಗೇ ವ್ಯಕ್ತಿಯೊಬ್ಬರ ಮೃತದೇಹ ಕುಡ ಸಂಪೂರ್ಣ ಸುಟ್ಟಸ್ಥಿತಿಯಲ್ಲಿ ಪತ್ತೆಯಾಗಿದೆ.

Home add -Advt

ಕಾರು ಹಾಗೂ ಮೃತ ವ್ಯಕ್ತಿ ಯಾರು? ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ? ಆಕಸ್ಮಿಕ ಘಟನೆಯೋ? ಎಂಬುದು ತಿಳಿದುಬಂದಿಲ್ಲ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಹಾಗೂ ಹೆಚ್ಚುವರಿ ಎಸ್ ಪಿ ಶೃತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button