Latest

ರಾಜ್ಯದಲ್ಲಿ ಸಮುದಾಯಕ್ಕೆ ಹರಡಿದೆ ಕೊರೊನಾ; ಸಚಿವ ಸುಧಾಕರ್ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಪರಿಸ್ಥಿತಿ ಕೈಮೀರುತ್ತಿದೆ. ಈ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ಮಣಿಪಾಲ್ ಆಸ್ಪತ್ರೆಗೆ ತೆರಳಿ ಸಿಎಂ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಬೆಂಗಳೂರಿನಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ. ಹಾಗಾಗಿ ನಾಳೆ ನಡೆಯಲಿರುವ ಸಭೆಯಲ್ಲಿ ಕಠಿಣ ನಿಯಮ ಜಾರಿಗೆ ತರಲಾಗುವುದು. ವಿಶೇಷವಾಗಿ ಬೆಂಗಳೂರಿನಲ್ಲಿ ಟಫ್ ರೂಲ್ಸ್ ಗೆ ಆದ್ಯತೆ ನೀಡಲಾಗುತ್ತಿದೆ ಎಂದರು.

Home add -Advt

ರಾಜ್ಯದಲ್ಲಿ ಕೊರೊನಾ ಸೋಂಕು ಈಗಾಗಲೇ ದೇಶಾದ್ಯಂತ ಕೊರೊನಾ ವೈರಸ್ ಸಮುದಾಯಗಳಿಗೆ ಹರಡಿದೆ. ಈ ಬಗ್ಗೆ ಪ್ರಧಾನಿ ಮೋದಿ ಕೂಡ ಎಚ್ಚರಿಕೆ ನೀಡಿದ್ದಾರೆ. ನಮ್ಮಲ್ಲಿ ಐಸಿಯು ಸಾಮರ್ಥ್ಯವನ್ನೂ ಮೀರಿ ಸಮಸ್ಯೆಗಳು ಎದುರಾಗುತ್ತಿರುವುದು ನಿಜ ಎಂದು ಹೇಳಿದರು.

Related Articles

Back to top button