Kannada NewsLatest

*ಮಹದಾಯಿ ಆದೇಶ, ಪಂಚಮಸಾಲಿ ಮೀಸಲಾತಿ ಬಿಜೆಪಿ ಚುನಾವಣೆ ಗಿಮಿಕ್: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಹದಾಯಿ ಆದೇಶ, ಪಂಚಮಸಾಲಿ ಮೀಸಲಾತಿ ಇದು ಬಿಜೆಪಿ ಚುನಾವಣೆ ಗಿಮಿಕ್ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ವಾಗ್ದಾಳಿ ನಡೆಸಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆ ಆಗಮಿಸುತ್ತಿದಂತೆ ಬಿಜೆಪಿಯವರು ಮಹದಾಯಿ ಆದೇಶ, ಪಂಚಮಸಾಲಿ ಮೀಸಲಾತಿ ದಾಳ ಉರುಳಿಸುತ್ತಿವೆ. ಯಾವುದೇ ಸ್ಪಷ್ಟತೇ ಇಲ್ಲ ಎಂದು ಕಿಡಿಕಾರಿದರು.

Home add -Advt

ಕಾಂಗ್ರೆಸ್‌ ನಿಂದ ಹುಬ್ಬಳ್ಳಿಯಲ್ಲಿ ಮಹದಾಯಿ ಯೋಜನೆ ಜಾರಿಯಾಗಬೇಕೆಂದು ಒತ್ತಾಯಿಸಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಮಹಾದಾಯಿ ನದಿ ನೀರು ಹಂಚಿಕೆ ಕುರಿತು ಸುಪ್ರೀಂ ಕೋರ್ಟ್ ಆದೇಶ ಬಂದರು ಕೂಡ ಸರ್ಕಾರ ಕಾರ್ಯರೂಪಕ್ಕೆ ತರುವುದೇ ಇರುವುದು ಹಾಗೂ ಗೆಜೆಟ್ ಮಾಡದೇ ಇರುವುದು ರಾಜ್ಯದ ಹಿತಾಶಕ್ತಿಯೇ ಕಾಯುವುದಕ್ಕೆ ಸರ್ಕಾರ ಸಂಪೂರ್ಣ ವಿಫಲ ಹೊಂದಿದೆ. ಸರ್ಕಾರದ ವಿಫಲತೆಯನ್ನು ಜನರ ಮುಂದೆ ಇಡುತ್ತೇವೆ ಎಂದು ಹೇಳಿದರು.

ಜ. 11 ರಿಂದ ಬೆಳಗಾವಿಯಿಂದ ಕಾಂಗ್ರೆಸ್ ಬಸ್ ಯಾತ್ರೆಗೆ ಚಾಲನೆ :
ಚಿಕ್ಕೋಡಿ ಹಾಗೂ ಬೆಳಗಾವಿಯಲ್ಲಿ ಒಂದೇ ದಿನದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ , ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಅವರು ಬಸ್ ಯಾತ್ರೆ ಮೂಲಕ ಚುನಾವಣಾ ಪ್ರಚಾರ ಕಾರ್ಯಕ್ರಮ ಬೆಳಗಾವಿಂದ ಹಮ್ಮಿಕೊಳ್ಳಲಿದ್ದಾರೆ. ಅದರ ಸಕಲ ಸಿದ್ಧತೆಯನ್ನು ಈಗಾಗಲೇ ಪ್ರಾರಂಭಿಸಿದ್ದೇವೆ ಎಂದರು.

ಚುನಾವಣೆಯ ಸನ್ನಿಹದಲ್ಲಿ ಆಕಾಂಕ್ಷಿಗಳ ಪಟ್ಟಿಯನ್ನು ಹೈಕಮಾಂಡಿಗೆ ರವಾನಿಸಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾವಿನ್ನು ಅದರ ಬಗ್ಗೆ ಸರಿಯಾದ ಮಾಹಿತಿ ಹಾಗೂ ಸಭೆ ತೆಗೆದುಕೊಂಡು ಅಂತಿಮ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

*4 ಹಿರಿಯ IPS ಅಧಿಕಾರಿಗಳ ದಿಢೀರ್ ವರ್ಗಾವಣೆ*

https://pragati.taskdun.com/4-ips-officerstransfferbelagavi-north-igp-n-stish-kumar/

Related Articles

Back to top button