Kannada NewsKarnataka News

*BREAKING: ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: 7 ಜನರಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ: ಬೆಳ್ಳಂಬೆಳಿಗ್ಗೆ ಮನೆಯಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡು 7 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಸಿಲಿಂಡರ್ ಸೋರಿಕೆಯಾಗಿ ಅವಘಡ ಸಂಭವಿಸಿದೆ ಎನ್ನಲಾಗಿದೆ.

Home add -Advt

ಘಟನೆಯಲ್ಲಿ ರಾಜು, ದುರಗೆಪ್ಪ, ಸುರೇಶ್, ಹುಸೇನಮ್ಮ, ನಾಗರಾಜ್, ವಿಷ್ಣು, ಶ್ರೀಕಾಂತ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

Related Articles

Back to top button