Latest

*ಪ್ರಾಣಿಗಳನ್ನು ಬಿಡದ ಕಾಮುಕರು: ನಾಯಿ ಜೊತೆ ಅಸಭ್ಯ ವರ್ತನೆ: ಯುವಕನ ವಿರುದ್ಧ ಪ್ರಕರಣ ದಾಖಲು*

ಪ್ರಗತಿವಾಹಿನಿ ಸುದ್ದಿ: ಮೂಕಪ್ರಾಣಿಗಳನ್ನು ಬಿಡದೇ ಕಾಮುಕರು ಅಟ್ಟಹಾಸ ಮೆರೆಯುತ್ತಿರುವ ಘಟನೆಗಳು ಆಗಾಗ ವರದಿಯಾಗುತ್ತಲೇ ಇರುತ್ತವೆ. ಇಲ್ಲೋರ್ವ ವ್ಯಕ್ತಿ ಬೀದಿನಾಯಿ ಜೊತೆ ಅಸಭ್ಯವಾಗಿ ವರ್ತಿಸಿದ್ದಲ್ಲದೇ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.

ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಜಯಪುರ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪ್ರಕರಣ ಸಂಬಂಧ ಕಾಮುಕ ಯುವಕನ ವಿರುದ್ಧ ಎಫ್ಐಆರ್ ದಾಖಲಾಗಿದೆ

Home add -Advt

ಜಯಪುರ ಪಟ್ಟಣದ ಬಸ್ ನಿಲ್ದಾಣದಲ್ಲಿ ಯುವಕನೊಬ್ಬ ಬೀದಿನಾಯಿಯನ್ನು ಹಿಡಿದುಕೊಂದು ಅಸಭ್ಯವಾಗಿ ವರ್ತಿಸಿದ್ದಾನೆ. ಈ ದೃಶ್ಯ ಬಸ್ ನಿಲ್ದಣ ಬಳಿ ಇರುವ ಅಂಗಡಿಯೊಂದರ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋ ಬಗ್ಗೆ ಪೊಲೀಸರು ಪರಿಶೀಲನೆ ನಡೆಸಿದಾಗ ಯುವಕ ನಾಯಿಜೊತೆ ಅಸಭ್ಯವಾಗಿ ವರ್ತಿಸಿರುವುದು ದೃಢವಾಗಿದೆ.

ಕರ್ತವ್ಯ ನಿರತ ಪೊಲೀಸ್ ಕಾನ್ಸ್ ಟೇಬಲ್ ಓರ್ವರು ನೀಡಿದ ದೂರಿನ ಆಧಾರದ ಮೇಲೆ ಜಯಪುರ ಠಾಣೆಯಲ್ಲಿ ಯುವಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.

Related Articles

Back to top button