Latest

*ಕಾಂಗ್ರೆಸ್ ಟಿಕೆಟ್ ಗಾಗಿ ದುಂಬಾಲು ಬಿದ್ದ PSI ಅಕ್ರಮದ ಕಿಂಗ್ ಪಿನ್ ರುದ್ರೇಗೌಡ ಪಾಟೀಲ್*

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಪಿಎಸ್ ಐ ನೇಮಕಾತಿ ಅಕ್ರಮದ ಕಿಂಗ್ ಪಿನ್ ರುದ್ರೇಗೌಡ ಪಾಟೀಲ್, ಮುಂಬರುವ ವಿಧನಸಭಾ ಚುನಾವಣೆಯಲ್ಲಿ ಕಲಬುರ್ಗಿಯ ಅಫಜಲಪುರ ಕ್ಷೇತ್ರದಿಂದ ಸ್ಪರ್ಧಿಸಲು ಇಚ್ಚಿಸಿದ್ದು, ಕಾಂಗ್ರೆಸ್ ಟಿಕೆಟ್ ಗಾಗಿ ದುಂಬಾಲು ಬಿದ್ದಿದ್ದಾರೆ.

ಈ ಬಗ್ಗೆ ರುದ್ರೇಗೌಡ ಪಾಟೀಲ್ ಸಹೋದರ ಮಹಾಂತೇಶ್ ಪಾಟೀಲ್ ಮಾಹಿತಿ ನೀಡಿದ್ದು, ರುದ್ರೇಗೌಡ ಪಾಟೀಲ್ ಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಕೈ ನಾಯಕರಿಗೆ ಮನವಿ ಮಾಡಿದ್ದೇವೆ. ಒಂದು ವೇಳೆ ಕಾಂಗ್ರೆಸ್ ಟಿಕೆಟ್ ಕೊಡದಿದ್ದರೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ತಿಳಿಸಿದ್ದಾರೆ.

ರುದ್ರೇಗೌಡ ಪಾಟೀಲ್ ಪ್ರಸ್ತುತ ಕಲಬುರ್ಗಿಯ ಜೈಲಿನಲ್ಲಿದ್ದಾರೆ. ಜಾಮೀನಿಗಾಗಿ ಹರಸಾಹಸ ಪಡುತ್ತಿದ್ದು, ಇದರ ನಡುವೆಯೇ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂಬ ಕಾರಣಕ್ಕೆ ಸಾಕಷ್ಟು ತಯಾರಿ ನಡೆಸಿರುವ ಪಿ ಎಸ್ ಐ ಅಕ್ರಮದ ಆರೋಪಿ ರುದ್ರೇಗೌಡ ಪಾಟೀಲ್ ಗೆ ಕಾಂಗ್ರೆಸ್ ಟಿಕೆಟ್ ನೀಡಲಿಯೇ ಕಾದುನೋಡಬೇಕಿದೆ.

*ಬೆಳಗಾವಿ: ಪಬ್ ನಿಂದ ಜಿಗಿದು ಯುವಕ ದುರ್ಮರಣ*

https://pragati.taskdun.com/youngdeathjumpbuildingbelagavi/

Related Articles

Back to top button