*ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಸ್ಟಾಲಿನ್; ಸರ್ಕಾರ ರಚನೆಗೆ ಅವಕಾಶ ಕೋರಿದ ವಿಜಯ್*

ಪ್ರಗತಿವಾಹಿನಿ ಸುದ್ದಿ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲನುಭಸಿರುವ ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ಅವರ ಟಿವಿಕೆ (ತಮಿಳಿಗ ವೆಟ್ರಿ ಕಳಗಂ)ಪಕ್ಷ 108 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು, ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಈ ಹಿನ್ನೆಲೆಯಲ್ಲಿ ಟಿವಿಕೆ ನಾಯಕರು ರಾಅಜಭವನಕ್ಕೆ ತೆರಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ನಟ ವಿಜಯ್ ರಾಜ್ಯಪಾಲರ ಭೇಟಿಗೆ ಅವಕಾಶ ಕೋರಿದ್ದಾರೆ. ಈ ನಡುವೆ ವಿಜಯ್ ಅವರನ್ನು ಟಿವಿಕೆ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.
ಆಡಳಿತಾರೂಢ ಡಿಎಂಕೆ ಹೀನಾಯ ಸೋಲಿನ ಬೆನ್ನಲ್ಲೇ ಸಿಎಂ ಸ್ಟಾಲಿನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರಿಗೆ ತಮ್ಮ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಸ್ಟಾಲಿನ್ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



