Latest

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗೆ ಜೀವ ಬೆದರಿಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಜೀವ ಬೆದರಿಕೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಿವರಾಜ್ ಕುಮಾರ್ ಅವರಿಗೆ ಹೆಚ್ಚಿನ ಭದ್ರತೆ ಒದಗಿಸಿದ್ದು, ಗನ್ ಮ್ಯಾನ್ ನಿಯೋಜನೆ ಮಾಡಿದೆ.

ಸಾಮಾಜಿಕ ಕಾರ್ಯಕರ್ತೆ ಬಿ.ಟಿ.ಲಲಿತಾ ನಾಯಕ್, ನನಗೆ ಹಿರಿಯ ಪತ್ರಕರ್ತರೊಬ್ಬರಿಗೆ ಹಾಗೂ ನಟ ಶಿವರಾಜ್ ಕುಮಾರ್ ಅವರಿಗೆ ಜೀವ ಬೆದರಿಕೆಯಿದೆ ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಟ ಶಿವರಾಜ್ ಕುಮಾರ್ ಭದ್ರತೆಗಾಗಿ ಗೃಹ ಸಚಿವಾಲಯ ಎರಡು ಪಾಳಿಯಲ್ಲಿ ನಾಲ್ಕು ಪೊಲೀಸರು ಹಾಗೂ ಗನ್ ಮ್ಯಾನ್ ನಿಯೋಜನೆ ಮಾಡಿದೆ.

Home add -Advt

ಈ ಬಗ್ಗೆ ಪ್ರತಿಕ್ರಿಯಿಸಿರುವ ನಟ ಶಿವರಾಜ್ ಕುಮಾರ್, ಈ ಸುದ್ದಿ ಬಗ್ಗೆ ಹೆಚ್ಚಿನ ಒತ್ತು ನೀಡುವುದು ಬೇಡ ಎಂದು ಹೇಳಿದ್ದಾರೆ ಎನ್ನಲಾಗಿದೆ.

Related Articles

Back to top button