Latest

*ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನ್ಸ್ ಟೇಬಲ್*

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಕಾನ್ಸ್ ಟೇಬಲ್ ಓರ್ವರು ಸರ್ವಿಸ್ ರೈಫಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘೋರ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ನಡೆದಿದೆ.

ಚಿತ್ತಾಪುರದ ತಹಶೀಲ್ದಾರ್ ಕಚೇರಿಯ ಮೇಲೆ ತೆರಳಿ ಸರ್ವಿಸ್ ರೈಫಲ್ 303 ರೈಫಲ್ ನಿಂದ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ. 34 ವರ್ಷದ ಮಲ್ಲಿಕಾರ್ಜುನ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಪೇದೆ.

Home add -Advt

ಶಹಬಾದ್ ಪಟ್ಟಣದ ನಿವಾಸಿಯಾಗಿದ್ದ ಮಲ್ಲಿಕಾರ್ಜುನ ಕೆಲ ವರ್ಷಗಳಿಂದ ಚಿತ್ತಾಪುರ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಚಿತ್ತಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://pragati.taskdun.com/karnatakaheavy-rain3-daysimdcyclone-effect/

Related Articles

Back to top button