World

*ಆತ್ಮಾಹುತಿ ಬಾಂಬ್ ದಾಳಿ: ಇಬ್ಬರು ಪೊಲೀಸರು ಸಾವು*

ಪ್ರಗತಿವಾಹಿನಿ ಸುದ್ದಿ: ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ಇಬ್ಬರು ಪೊಲೀಸರು ಸಾವನ್ನಪ್ಪಿದ್ದಾರೆ.

Home add -Advt

ಪೇಶಾವರದ ಚಮ್ಕಾನಿ ಪೊಲೀಸ್ ಠಾಣೆ ವ್ಯಾಪ್ತಿಯ ರಿಂಗ್ ರಸ್ತೆಯಲ್ಲಿರುವ ಜಾನುವಾರು ಮಾರುಕಟ್ಟೆಯ ಬಳಿ ಆತ್ಮಹತ್ಯಾ ಬಾಂಬರ್ ಪೊಲೀಸ್ ಮೊಬೈಲ್ ವ್ಯಾನ್ ಮೇಲೆ ದಾಳಿ ನಡೆಸಿದ್ದಾನೆ . ಈ ವೇಳೆ ಇಬ್ಬರು ಪೊಲೀಸರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

Related Articles

Back to top button