Kannada NewsKarnataka NewsLatestPolitics

*ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿಗೆ ಸಮಯ ನಿಗದಿ: ಡಿಸಿಎಂ ಮಾಹಿತಿ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಲು ಸಮಯ ನಿಗದಿಯಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

Home add -Advt

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಕಾವೇರಿ ನದಿ ನೀರು ವಿಚರವಾಗಿ ನಮ್ಮ ರೈತರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ. ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಲು ಸಮಯ ಕೇಳಿದ್ದೇವೆ. ಮಧ್ಯರಾತ್ರಿ 1 ಗಂಟೆಗೆ ಸಮಯ ನೀಡಿದರೂ ನಾವು ಭೇಟಿಗೆ ಸಿದ್ಧ. ಸಚಿವರ ಭೇಟಿಗೆ ಸಮಯ ನಿಗದಿಯಾಗಿದೆ ಎಂದರು.

ನಾಳೆ ಬೆಳಿಗ್ಗೆ 10:30ಕ್ಕೆ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಭೇಟಿಗೆ ಸಮಯ ನಿಗದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಭೇಟಿಗೆ ಇನ್ನೂ ಸಮಯ ನಿಗದಿಯಾಗಿಲ್ಲ ಎಂದು ಹೇಳಿದರು.

Related Articles

Back to top button