Karnataka NewsPolitics

*ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ಶವವಾಗಿ ಪತ್ತೆ*

6 ಜನರ ವಿರುದ್ಧ ಎಫ್ಐಆರ್

ಪ್ರಗತಿವಾಹಿನಿ ಸುದ್ದಿ: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ಮೃತದೇಹ ಮಂಗಳೂರಿನ ಫಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ.

Home add -Advt

ನಿನ್ನೆ ಮುಂಜಾನೆಯಿಂದ ಮುಮ್ತಾಜ್ ಅಲಿ ನಾಪತ್ತೆಯಾಗಿದ್ದರು. ಅವರ BMW ಕಾರು ಕೂಳೂರು ಸೇತುವೆ ಬಳಿ ಡ್ಯಾಮೇಜ್ ಆಗಿರುವ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮುಮ್ತಾಜ್ ಅಲಿ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಹಿನ್ನೆಲೆಯಲ್ಲಿ ನಿನ್ನೆಯಿಂದ ನಿರಂತರವಾಗಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಇದೀಗ ಮುಮ್ತಾಜ್ ಅಲಿ ಅವರ ಮೃತದೇಹ ಕೂಳುರು ಸೇತುವೆ ಬಳಿ ಫಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ. ತಣ್ಣೀರುಬಾವಿ ಮುಳುಗು ತಜ್ಞರ ತಂಡ ನದಿಯಿಂದ ಮುಮ್ತಾಜ್ ಅಲಿ ಶವ ಹೊರತೆಗೆದಿದೆ.

ಇನ್ನೊಂದೆಡೆ ಮಹಿಳೆ ಬಳಸಿಕೊಂಡು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ 6 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಮುಮ್ತಾಜ್ ಅಲಿ ಸಹೋದರ ಹೈದರ್ ನೀಡಿದ ದೂರಿನ ಆಧಾರದಲ್ಲಿ ರೆಹಮತ್, ಅಬ್ದುಲ್ ಸತ್ತಾರ್, ಶಾಫಿ, ಮುಸ್ತಫಾ, ಶೋಯೆಬ್ ಹಾಗೂ ಸಿರಾಜ್ ವಿರುದ್ಧ ಪ್ರಕರಣ ದಾಖಲಾಗಿದೆ.


Related Articles

Back to top button