Belagavi NewsBelgaum NewsKarnataka NewsLatestPolitics

*ನಾಳೆ ಬೆಳಗಾವಿಗೆ ಸಿಎಂ ಸಿದ್ದರಾಮಯ್ಯ: ಅಲ್ಲಿಯೇ ವಾಸ್ತವ್ಯ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಧಾರವಾಡ ಹಾಗೂ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ನಾಳೆ ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಧಾರವಾಡಕ್ಕೆ ತೆರಳಲಿರುವ ಸಿಎಂ ಸಿದ್ದರಾಮಯ್ಯ, ನವಲಗುಂದದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಬಳಿಕ ಮಧ್ಯಾಹ್ನ ಧಾರವಾಡದಿಂದ ಬೆಳಗಾವಿಗೆ ತೆರಳಿಲಿದ್ದು, ಮಧ್ಯಾಹ್ನ 3:30ರ ಸುಮಾರಿಗೆ ಬೆಳಗಾವಿ ಸುವರ್ಣ ಸೌಧದ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ. ಬೆಳಗಾವಿಯಲ್ಲಿಯೇ ವಾಸ್ತವ್ಯ ಹೂಡಲಿರುವ ಸಿಎಂ ಸಿದ್ದರಾಮಯ್ಯ, ಸೋಮವಾರದಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಭಾಗಿಯಾಗಲಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button