Latest

ಫಡ್ನವೀಸ್ ಗೆ ಟ್ವೀಟ್ ನಲ್ಲಿ ತಿರುಗೇಟು ನೀಡಿದ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕರ್ನಾಟಕ- ಮಹಾರಾಷ್ಟ್ರ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಚೋದನಾತ್ಮಕ ಹೇಳಿಕೆ ನೀಡಿದ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

ಗಡಿ ವಿಚಾರದಲ್ಲಿ ದೇವೇಂದ್ರ ಫಡ್ನವೀಸ್ ಅವರ ಕನಸು ಎಂದಿಗೂ ನನಸಾಗುವುದಿಲ್ಲ. ನಾಡಿನ ನೆಲ, ಜಲ, ಗಡಿ ರಕ್ಷಣೆ ವಿಚಾರದಲ್ಲಿ ನಮ್ಮ ಸರಕಾರ ಕಟಿಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

Home add -Advt

ಕರ್ನಾಟಕ ಗಡಿ ಜಿಲ್ಲೆಗಳಲ್ಲಿ ಒಂದಿಂಚು ಜಾಗವನ್ನೂ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರದಲ್ಲಿರುವ ಕನ್ನಡ ಭಾಷಿಕ ಪ್ರದಶಗಳಾದ ಸೋಲಾಪುರ, ಅಕ್ಕಲಕೋಟೆ ಕರ್ನಾಟಕಕ್ಕೆ ಸೇರಬೇಕೆನ್ನುವುದು ನಮ್ಮ ಆಗ್ರಹವಾಗಿದೆ ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರ 2004ರಿಂದಲೂ  ಎರಡೂ ರಾಜ್ಯಗಳ ಗಡಿ ವಿಚಾರದಲ್ಲಿ ಕ್ಯಾತೆ ತೆಗೆದು ಸುಪ್ರೀಂ ಕೋರ್ಟ್ ನಲ್ಲಿ ದಾವೆ ಹೂಡಿದೆ. ಇದುವರೆಗೂ ಯಶಸ್ವಿಯಾಗಿಲ್ಲ. ಮುಂದೆಯೂ ಆಗುವುದಿಲ್ಲ. ನಾವು ನಮ್ಮ ಕಾನೂನು ಹೋರಾಟವನ್ನು ಪ್ರಬಲವಾಗಿ ಮಾಡಲು ಸನ್ನದ್ಧರಾಗಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಬ್ಯಾಂಕ್‌ನಲ್ಲೇ ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದ ರೈತ ಸಾವು

Related Articles

Back to top button