Latest

*ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಮಕ ಸಿಬ್ಬದಿ ದೌಡಾಯಿಸಿದ್ದಾರೆ.

Home add -Advt

ಎಂ.ಎಸ್.ರಾಮಯ್ಯ ಆಸ್ಪತ್ರೆಯ ಮೂರನೇ ಮಹಡಿಯ ಕಾರ್ಡಿಯಾಕ್ ಐಸಿಯುನಲ್ಲಿ ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನರ್ಸ್ ಗಳ ಸಮಯ ಪ್ರಜ್ಞೆಯಿಂದ ರೋಗಿಗಳನ್ನು ತಕ್ಷಣ ಶಿಫ್ಟ್ ಮಾಡಲಾಗಿದೆ. ನರ್ಸ್ ಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಬೆಂಕಿ ಅವಘಡ ಸಂಭವಿಸುತ್ತಿದ್ದಂತೆ ವೈದ್ಯರು, ಸಿಬ್ಬಂದಿಗಳು ಆಸ್ಪತ್ರೆಯಿಂದ ಹೊರಗೋಡಿಬಂದಿದ್ದಾರೆ. ಕೆಲ ಕಾಲ ಆಸ್ಪತ್ರೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.


Related Articles

Back to top button