Latest

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲೇ ಮಾಜಿ ಶಾಸಕರಿಗೆ ಹೃದಯಾಘಾತ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರಿಗೆ ಹೃದಯಾಘಾತವಾಗಿದ್ದು, ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿಯೇ ಕುಸಿದು ಬಿದ್ದ ಘಟನೆ ನಡೆದಿದೆ.

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ವರ್ತೂರು ಬಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ನಡೆಯುತ್ತಿದ್ದು, ಸಭೆ ಆರಂಭಕ್ಕೂ ಕೆಲ ಸಮಯದ ಮೊದಲು ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರಿಗೆ ಹೃದಯಾಘಾತವಾಗಿದೆ.

Home add -Advt

ಸಭೆಗೆ ಬಂದಿದ್ದ ಮಾಜಿ ಶಾಸಕರಿಗೆ ಇದ್ದಕ್ಕಿದ್ದಂತೆ ವಾಂತಿಯಾಗಿದ್ದು, ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀಶೈಲಪ್ಪ ಬಿದರೂರು ಗದಗ, ರೋಣ ಕ್ಷೇತ್ರದ ಶಾಸಕರಾಗಿದ್ದರು. 2019ರಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದರು.

ಬೆಳಗಾವಿ ಕಾಂಗ್ರೆಸ್ ಟಿಕೇಟ್‍ಗೆ ಆಕಾಂಕ್ಷಿಗಳ ದಂಡು

Related Articles

Back to top button