Kannada NewsKarnataka NewsPolitics

*ನಾಯಕತ್ವ ಬದಲಾವಣೆ ಬಗ್ಗೆ ಜ್ಯೋತಿಷಿ ಬಳಿ ಕೇಳಿ: ಗರಂ ಆದ ಡಿಕೆಶಿ*

ಪ್ರಗತಿವಾಹಿನಿ ಸುದ್ದಿ: ನಾಯಕತ್ವ ಬದಲಾವಣೆ ಬಗ್ಗೆ ಜ್ಯೋತಿಷಿ ಬಳಿ ಕೇಳಿ ಎಂದು ಮಾಧ್ಯಮದವರು ನಾಯಕತ್ವ ಬದಲಾವಣೆ ಕುರಿತು ಡಿಸಿಎಂ ಡಿ.ಕೆ ಶಿವಕುಮಾರ್ ಬಳಿ ಕೇಳಿದಾಗ ಗುಡುಗಿದ್ದಾರೆ.

ಖರ್ಗೆ ಅವರನ್ನು ಭೇಟಿಯಾದ ನಂತರ ದೆಹಲಿಯಿಂದ ಬೆಂಗಳೂರಿಗೆ ಹಿಂದಿರುಗಿದ ಡಿ.ಕೆ.ಶಿವಕುಮಾ‌ರ್ ಅವರನ್ನು ನಾಯಕತ್ವ ಬದಲಾವಣೆಯ ಸಾಧ್ಯತೆಯ ಬಗ್ಗೆ ಮಾಧ್ಯಮದವರು ಮತ್ತೆ ಕೇಳಿದಾಗ, ಸಂಪುಟ ವಿಸ್ತರಣೆ ಅಥವಾ ನಾಯಕತ್ವ ಬದಲಾವಣೆಯ ಬಗ್ಗೆ ನೀವು ಜ್ಯೋತಿಷಿಯವರನ್ನೇ ಸಂಪರ್ಕಿಸಿ ಎಂದು ಉತ್ತರಿಸಿದ್ದಾರೆ.

Home add -Advt

ಇನ್ನು ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್ ಕರ್ನಾಟಕ ಘಟಕದ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡುವ ವದಂತಿಗಳನ್ನು ತಳ್ಳಿಹಾಕಿದ್ದಾರೆ. ತಾವು ಶಿಸ್ತಿನ ಸಿಪಾಯಿಯಾಗಿದ್ದು, ತಮ್ಮ ಕೆಲಸಗಳಿಗೆ ಯಾವಾಗಲೂ ಬದ್ಧರಾಗಿರುವುದಾಗಿ ಹೇಳಿದ್ದಾರೆ.

ದೆಹಲಿ ಭೇಟಿ ಬಗ್ಗೆ ಪ್ರಶ್ನಿಸಿದಾಗ, ಕರ್ನಾಟಕದಲ್ಲಿ 100 ಹೊಸ ಕಾಂಗ್ರೆಸ್‌ ಕಚೇರಿಗಳಿಗೆ ಶಂಕುಸ್ಥಾಪನೆ ಸಮಾರಂಭಕ್ಕೆ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸಲು ದೆಹಲಿಗೆ ತೆರಳಿದ್ದಾಗಿ ತಿಳಿಸಿದ್ದಾರೆ.

Related Articles

Back to top button