Election NewsNationalPolitics
*ಹೃದಯಾಘಾತ: ಶಾಸಕರ ಹಠಾತ್ ನಿಧನ*

ಪ್ರಗತಿವಾಹಿನಿ ಸುದ್ದಿ: ತೆಲಂಗಾಣದ ಬಿಆರ್ಎಸ್ ಶಾಸಕ ಮಗಂತಿ ಗೋಪಿನಾಥ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬೆಳಗ್ಗೆ 5:45ಕ್ಕೆ ಬೆಳಗ್ಗೆ ಅವರಿಗೆ ಹೃದಯಾಘಾತವಾಗಿದೆ. ಆಗ ಅವರನ್ನು ಹೈದರಾಬಾದ್ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಮುಂಜಾನೆ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
63 ವರ್ಷದ ಗೋಪಿನಾಥ್ ಅವರು ಮೂರು ಬಾರಿ ಶಾಸಕರಾಗಿದ್ದರು. ಗೋಪಿನಾಥ್ ತಮ್ಮ ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.




