Belagavi NewsBelgaum NewsKannada NewsKarnataka NewsNational

*ಇಂದಿನಿಂದ ಮತ್ತಷ್ಟು ಹೆಚ್ಚಲಿದೆ ಮಳೆ ಅಬ್ಬರ: 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಈಗಾಗಲೇ ಅಬ್ಬರಿಸುತ್ತಿರುವ ಮಳೆಯಿಂದ ಸಾಕಷ್ಟು ಅವಾಂತರಗಳು ಉಂಟಾಗಿದೆ.‌

ಮುಂದೆ ಮಳೆ ಮತ್ತಷ್ಟು ಹೆಚ್ಚಲಿದ್ದು, ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.‌

ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ. 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ತುಮಕೂರು, ರಾಮನಗರ, ಕೋಲಾರ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಬೀದರ್ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು ಸಕಲ ಮೊನ್ನೆಚ್ಚರಿಕೆ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ಕಳೆದ 3 ದಿನದಿಂದ ಸುರಿದ ಮಳೆಗೆ ಭಾರೀ ಅವಾಂತರ ಸೃಷ್ಟಿಯಾಗಿದೆ. ರಣಮಳೆಗೆ ರಾಜಧಾನಿ ಕಂಗೆಟ್ಟಿ ಹೋಗಿದ್ದು, ಜನ ಜೇವನ ಅಸ್ತವ್ಯಸ್ತವಾಗಿದೆ. ಕಳೆದ 2 ದಿನಗಳಿಂದ ಸರಣಿ ಅವಾಂತರ ಸೃಷ್ಟಿಮಾಡಿದೆ.

ಈವರೆಗೂ ಬೆಂಗಳೂರಿನಲ್ಲಿ ಮಳೆಗೆ ಮೂವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಳೆ ಹಾನಿ ಪ್ರದೇಶಗಳಲ್ಲಿ ಎಸ್‌ಡಿಆರ್‌ಎಫ್ ಹಾಗೂ ಬಿಬಿಎಂಪಿ ಸಿಬ್ಬಂದಿ ಪರಿಹಾರ ಕ್ರಮ ಕೈಗೊಳ್ಳುತ್ತಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button