Kannada NewsKarnataka NewsLatest

*ಯೂಟ್ಯೂಬ್ ಚಾನಲ್ ಮಾಲೀಕ ಸೇರಿ ಇಬ್ಬರ ಬಂಧನ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸುದ್ದಿ ಪ್ರಸಾರ ಮಾಡುತ್ತೇವೆ ಎಂದು ಹೆದರಿಸಿ ಹಣ ವಸೂಲಿ ಮಡುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಯೂಟ್ಯೂಬ್ ಚಾನಲ್ ಮಾಲೀಕ ಸೇರಿ ಇಬ್ಬರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆತ್ಮಾನಂದ್ ಹಾಗೂ ಆನಂದ್ @ ಫಿಗರ್ ಆನಂದ್ ಬಂಧಿತ ಆರೋಪಿಗಳು. ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ, ಅಕ್ರಮ ಗೋಮಾಂಸ ಸಾಗಣೆ ವಾಹನ, ಸ್ಪಾಗಳಿಗೆ ತೆರಳಿ ಯೂಟ್ಯೂಬ್ ಚಾನಲ್ ನಲ್ಲಿ ಸುದ್ದಿ ಪ್ರವಾಸ ಮಾಡುತ್ತೇವೆ ಎಂದು ಬೆದರಿಕೆಯೊಡ್ಡಿ ಹಣ ವಸೂಲಿ ಮಾಡುತ್ತಿದ್ದರು.

ಇಬ್ಬರು ಆರೋಪಿಗಳ ವಿರುದ್ಧ ವಿವಿಧ ಠಾಣೆಗಳಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಯೂಟ್ಯೂಬ್ ಚಾನಲ್ ಮಾಲೀಕ ಸೇರಿ ಇಬ್ಬರನ್ನು ಬಂಧಿಸಿದ್ದಾರೆ.

Related Articles

Back to top button