Kannada NewsKarnataka NewsLatestPolitics
*ಉಯ್ಯಾಲೆಯಾಡುವಾಗ ಆಕಸ್ಮಿಕವಾಗಿ ಬಿದ್ದು ಶಿಕ್ಷಕಿ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಶಿಕ್ಷಕಿಯೊಬ್ಬರು ಉಯ್ಯಾಲೆಯಾಡುವಾಗ ಮಹಡಿ ಮೇಲಿನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದಲ್ಲಿ ನಡೆದಿದೆ.
ಕೆ.ಪುಟ್ಟಿ (35) ಮೃತ ಶಿಕ್ಷಕಿ. ಜೆ.ಪಿ.ಮಲ್ಲಪ್ಪಪುರಂ ಬಡಾವಣೆಯ ನಿವಾಸಿ. ಯಳಂದೂರು ತಾಲೂಕಿನ ಮಾಂಬಳ್ಳಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಉಯ್ಯಾಲೆಯಾಡುತ್ತಿದ್ದ ವೇಳೆ ಮನೆಯ ಎರಡನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೊಳ್ಳೆಗಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಕೊಳ್ಳೆಗಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




