Latest

ಕಾಂಗ್ರೆಸ್ ಮುಖಂಡರೊಂದಿಗೆ ಸಿಎಂ ಚರ್ಚೆ

ವಾಷಿಂಗ್ಟನ್ ಡಿಸಿ:

ವಾಷಿಂಗ್ಟನ್ ಡಿ.ಸಿ.ಗೆ ತೆರಳುವ ಮುನ್ನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಶಾಸಕರ ರಾಜೀನಾಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರೊಂದಿಗೆ ದೂರವಾಣಿಯಲ್ಲಿ ಚರ್ಚಿಸಿದರು.

Home add -Advt

ಮೈತ್ರಿಕೂಟದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯದ ಉಸ್ತುವಾರಿ ವಹಿಸಿರುವ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ದೂರವಾಣಿ ಮೂಲಕ ಚರ್ಚಿಸಿದರು. ರಾಜ್ಯ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ ಎಂದು ಈ ಮುಖಂಡರು ಮುಖ್ಯಮಂತ್ರಿಗಳಿಗೆ ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ನ್ಯೂಜೆರ್ಸಿಯಿಂದ ವಾಷಿಂಗ್ಟನ್ ಡಿ.ಸಿ.ಗೆ ತೆರಳಿದರು.

ಜುಲೈ 5 ರಂದು ಒಕ್ಕಲಿಗರ ಪರಿಷತ್ ಅಮೆರಿಕಾದ ಸಮಾವೇಶದಲ್ಲಿ ಭಾಗವಹಿಸಿ, ಬೆಂಗಳೂರಿಗೆ ಹಿಂದಿರುಗುವರು.

Related Articles

Back to top button