Kannada NewsKarnataka NewsLatestPolitics
*ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಭಾವ ನಾಪತ್ತೆ*

ಪ್ರಗತಿವಾಹಿನಿ ಸುದ್ದಿ; ರಾಮನಗರ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಭಾವ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಮಹದೇವಯ್ಯ ನಾಪತ್ತೆಯಾಗಿರುವ ಸಿ.ಪಿ.ಯೋಗೇಶ್ವರ್ ಭಾವ. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆ ಗ್ರಾಮದ ತೋಟದ ಮನೆಯಲ್ಲಿ ತಂಗಿದ್ದ ಮಹದೇವಯ್ಯ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ.
ಮೆಗಾಸಿಟಿ ನಿರ್ದೇಶಕರಾಗಿ, ಉದ್ಯಮಿಯಾಗಿ ಕಾರ್ಯನಿರ್ವಹಿಸುತ್ತಿರುವ ಮಹದೇವಯ್ಯ ತೋಟದ ಮನೆಗೆ ಬಂದಿದ್ದರು. ಆದರೆ ಇಂದು ಬೆಳಿಗ್ಗೆ ನಾಪತ್ತೆಯಾಗಿದ್ದಾರೆ. ಮಹದೇವಯ್ಯನವರನ್ನು ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿರುವ ಶಂಕೆ ವ್ಯಕ್ತವಾಗಿದೆ. ತೋಟದ ಮನೆಯಲ್ಲಿದ್ದ ವಸ್ತುಗಳು ಚಲ್ಲಾಪಿಲ್ಲಿಯಾಗಿದ್ದು, ಮೊಬೈಲ್ ಸ್ವಿಚ್ಡ್ ಆಫ್ ಆಗಿದೆ. ಚನ್ನಪಟ್ಟಣ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



