Karnataka News

ಮಹಾರಾಷ್ಟ್ರಕ್ಕೆ ಸಿಎಂ ಬೊಮ್ಮಾಯಿ ಖಡಕ್ ವಾರ್ನಿಂಗ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕರ್ನಾಟಕದ ಗಡಿ ಭಾಗದ ಜನರಿಗೆ ಆರೋಗ್ಯ ವಿಮೆ ಯೋಜನೆ ಜಾರಿಗೊಳಿಸುವ ಆದೇಶ ಹೊರಡಿಸಿರುವ ಮಹಾರಾಷ್ಟ್ರ ಸರಕಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್ ವಾರ್ನಿಂಗ್ ಮಾಡಿದ್ದಾರೆ.

https://pragati.taskdun.com/maharashtra-has-once-again-attacked-the-center-and-the-karnataka-government/

ಆದೇಶವನ್ನು ತಕ್ಷಣ ಹಿಂದಕ್ಕೆ ಪಡೆಯಿರಿ, ಇಲ್ಲವಾದಲ್ಲಿ ಮಹಾರಾಷ್ಟ್ರದಲ್ಲಿರುವ ಕನ್ನಡಿಗರಿಗಾಗಿ ನಾವೂ ಅಂತಹುದೇ ಯೋಜನೆ ಜಾರಿಗೊಳಿಸುತ್ತೇವೆ ಎಂದು ಅವರು ಎಚ್ಚರಿಸಿದ್ದಾರೆ. ಈ ಕುರಿತು ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

Home add -Advt

ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್ ‌ನಲ್ಲಿ ಇದ್ದರೂ ಮಹಾರಾಷ್ಟ್ರ ಸರ್ಕಾರ ಎರಡೂ ರಾಜ್ಯಗಳ ಗಡಿ ಭಾಗದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಕರ್ನಾಟಕದ ಗಡಿಯಲ್ಲಿರುವ ಕೆಲವರಿಗೆ ವಿಮೆ ನೀಡುವ ಆದೇಶ ಮಾಡಿರುವುದು ಉದ್ದಟತನದ ಪರಮಾವಧಿಯಾಗಿದ್ದು, ಇದು ಎರಡು ರಾಜ್ಯಗಳ ನಡುವಿನ ಬಾಂಧವ್ಯ ಕದಡುವ ಪ್ರಯತ್ನವಾಗಿದೆ ಎಂದಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಶಿಂಧೆ ಹಾಗೂ ಉಪ ಮುಖ್ಯಮಂತ್ರಿ ದೇವೇಂದ್ರ ಪಡ್ನವೀಸ್ ಅವರು ಗಡಿ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲ ಸೃಷ್ಟಿಸುವುದಿಲ್ಲ ಎಂದು ಒಪ್ಪಿಕೊಂಡಿದ್ದರು. ಈಗ ಕರ್ನಾಟಕದ 865 ಗ್ರಾಮಗಳ ಜನತೆಗೆ ಜ್ಯೊತಿರಾವ್ ಫುಲೆ ಜನ ಆರೋಗ್ಯ ಯೋಜನೆ ಜಾರಿಗೆ ಆದೇಶ ಮಾಡಿರುವುದು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಕೆಲಸವಾಗಿದೆ. ಮಹಾರಾಷ್ಟ್ರ ಸರ್ಕಾರ ತಕ್ಷಣ ತನ್ನ ಆದೇಶವನ್ನು ವಾಪಸ್ ಪಡೆದು, ಅಮಿತ್ ಶಾ ಅವರ ಸೂಚನೆಗೆ ಗೌವರ ಕೊಡುವ ಮೂಲಕ ಎರಡೂ ರಾಜ್ಯಗಳ ನಡುವಿನ ಬಾಂಧವ್ಯ ಕಾಪಾಡುವ ಕೆಲಸ ಮಾಡಬೇಕು. ಮಹಾರಾಷ್ಟ್ರ ಸರ್ಕಾರ ಇದೇ ರೀತಿ ಉದ್ದಟತನ ಮುಂದುವರೆಸಿದರೆ ಕರ್ನಾಟಕ ಸರ್ಕಾರವೂ ಕೂಡ ಮಹಾರಾಷ್ಟ್ರ ಗಡಿಯಲ್ಲಿರುವ ಕನ್ನಡಿಗರ ರಕ್ಷಣೆಗೆ ಇದೇ ರೀತಿಯ ವಿಮೆ ಜಾರಿಗೊಳಿಸಲಾಗುವುದು ಎಂದು ಬೊಮ್ಮಾಯಿ ಎಚ್ಚರಿಸಿದ್ದಾರೆ.

ಕರ್ನಾಟಕ ಗಡಿಯಲ್ಲಿರುವ ಜನರಿಗೆ ವಿಮೆ ನೀಡುವ ಹೆಸರಿನಲ್ಲಿ ಮಹಾರಾಷ್ಟ್ರ ಸರ್ಕಾರ, ಅವರಿಂದ ಮಹಾರಾಷ್ಟ್ರಕ್ಕೆ ಸೇರಿದವರೆಂದು ಘೋಷಣಾ ಪತ್ರ ತೆಗೆದುಕೊಳ್ಳುವುದು ಖಂಡನೀಯ ಎಂದೂ ಅವರು ಹೇಳಿದ್ದಾರೆ.

https://pragati.taskdun.com/maharashtra-has-once-again-attacked-the-center-and-the-karnataka-government/
https://pragati.taskdun.com/telangana-bjp-presidentarrestedquestion-paper-leak-case/

Related Articles

Back to top button