Karnataka News
*8 ವರ್ಷದ ಬಾಲಕನನ್ನು ಅಪಹರಿಸಿ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಪಕ್ಕದ ಮನೆಯವರ ಮೇಲಿನ ಧ್ವೇಷಕ್ಕಾಗಿ 8 ವರ್ಷದ ಬಾಲಕನನ್ನೇ ಅಪಹರಿಸಿ ಹತ್ಯೆ ಮಾಡಿರುವ ಘೋರ ಘಟನೆ ನಡೆದಿದೆ.
ರಾಜ್ಯ ರಾಜಧಾನಿ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ರಮಾನಂದ (8) ಕೊಲೆಯಾಅ ಬಾಲಕ. ಬಾಲಕನನ್ನು ಅಪಹರಿಸಿ ಹತ್ಯೆಗೈದು ಬಳಿಕ ಗೋಣಿಚೀಲದಲ್ಲಿ ತುಂಬಿ ಕೆರೆಯ ಬಳಿ ಶವವನ್ನು ಎಸೆದು ಹೋಗಿದ್ದಾರೆ.
ರಾಮಸಂದ್ರ ಕೆರೆ ಬಳಿ ಬಾಲಕನ ಮೃತದೇಹ ಪತ್ತೆಯಾಗಿದೆ. ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮತ್ತೂರು ಎಂದು ಗುರುತಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡೊರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.


