Karnataka NewsPolitics

*ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕನ ವಿರುದ್ಧ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ: ಹೆಚ್.ಡಿ.ಕೋಟೆಯಲ್ಲಿ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಆರೋಪಿ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿರುವುದಾಗಿ ತಿಳಿಸಿದರು.

Home add -Advt

ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಶಾಲೆಯ ಶಿಕ್ಷಕನೋರ್ವ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ವರದಿ ಗಮನಕ್ಕೆ ಬಂದಿದ್ದು, ಖಂಡಿತವಾಗಿ ಸರ್ಕಾರವು ಮಕ್ಕಳ ಹಾಗೂ ಪೋಷಕರ ಪರ ನಿಲ್ಲುತ್ತದೆ. ಲೈಂಗಿಕ ದೌರ್ಜನ್ಯ ಪಿಡುಗನ್ನು ಬೇರು ಸಮೇತ ಕಿತ್ತೊಗೆಯಬೇಕಿದೆ. ಈ ಪ್ರಕರಣದಲ್ಲಿ ದೂರು ದಾಖಲಾಗಿರುವ ಬಗ್ಗೆ ಪರಿಶೀಲನೆ ನಡೆಸುತ್ತೇನೆ ಎಂದರು.

ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ಅವರನ್ನು ಪೊಲೀಸ್ ಠಾಣೆಗೆ ಕಳುಹಿಸಿ ವರದಿ ತರಿಸಿಕೊಳ್ಳಲಾಗುವುದು. ಈ ಬಗ್ಗೆ ದೂರು ದಾಖಲಿಸಿಕೊಳ್ಳುವಂತೆಯೂ ತಿಳಿಸಿರುವುದಾಗಿ ಸಚಿವರು ಹೇಳಿದರು.

ಹೆಚ್.ಡಿ.ಕೋಟೆ ತಾಲೂಕಿನ ಸರ್ಕಾರಿ ಶಾಲೆಯೊಂದರ ಪ್ರಭಾರ ಮುಖ್ಯ ಶಿಕ್ಷಕ ಗಿರೀಶ್ ಎಂಬಾತನ ವಿರುದ್ಧ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ಪೋಕ್ಸೋ ಕೇಸ್ ದಾಖಲಾಗಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರೋಪಿ ನಾಪತ್ತೆಯಾಗಿದ್ದಾನೆ.

Related Articles

Back to top button