Latest

ಎನ್ ಪಿಎಸ್ ರದ್ದತಿಗೆ ಆಗ್ರಹಿಸಿ ಸರಕಾರಿ ನೌಕರರ ಸಂಕಲ್ಪ ಯಾತ್ರೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಎನ್ ಪಿಎಸ್ ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆಯನ್ನೇ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿಯಲ್ಲಿ ರಾಜ್ಯ ಸರ್ಕಾರಿ ನೌಕರರು ಭಾನುವಾರ ಒಪಿಎಸ್‌ ಸಂಕಲ್ಪ ಯಾತ್ರೆ ಹಮ್ಮಿಕೊಂಡಿದ್ದು, ನಗರದಲ್ಲಿ ಮೆರವಣಿಗೆ ನಡೆಸಿದರು.

ಕೋಟೆ ಕೆರೆ ಬಳಿಯ ಅಶೋಕ ವೃತ್ತದಿಂದ ಮೆರವಣಿಗೆ ಪ್ರಾರಂಭಗೊಂಡಿತು. ರಾಣಿ ಚನ್ನಮ್ಮ ವೃತ್ತದ ಮೂಲಕ ಸರ್ದಾರ್ಸ್‌ ಪ್ರೌಢಶಾಲೆ ಮೈದಾನದವರೆಗೆ ನೌಕರರು ಮೆರವಣಿಗೆ ನಡೆಸಿದರು.

ವಿವಿಧ ಸರಕಾರಿ ಇಲಾಖೆಗಳ ಸಾವಿರಾರು ನೌಕರರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

Home add -Advt

ರಾಜ್ಯದಲ್ಲಿ 2006 ಏಪ್ರಿಲ್‌ 1ರ ನಂತರ ಸೇರಿದ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಯಿಂದ ನಿವೃತ್ತಿಯಾದವರಿಗೆ ಅಲ್ಪ ಪ್ರಮಾಣದ ಪಿಂಚಣಿ ಸಿಗಲಿದೆ. ಇದು ಶೇರು ಮಾರುಕಟ್ಟೆ ಆಧಾರಿತ ಪಿಂಚಣಿ ಯೋಜನೆಯಾಗಿದೆ. ಇದನ್ನು ವಿರೋಧಿಸಿ ಈಗಾಗಲೇ ಹಲವಾರು ಹೋರಾಟಗಳನ್ನು ರೂಪಿಸಲಾಗಿದೆ. ಆದರೂ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಗೆ ಮೂವರು ಬಲಿ

https://pragati.taskdun.com/latest/electrick-wire3-deathmysore/

Related Articles

Back to top button