Kannada NewsKarnataka NewsLatest

*BREAKING: 7.11 ಕೋಟಿ ದರೋಡೆ ಪ್ರಕರಣ: ತಲೆಮರೆಸಿಕೊಂಡಿದ್ದ ಮತ್ತೆ ಮೂವರು ಆರೋಪಿಗಳು ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಡೇರಿ ಸರ್ಕಲ್ ನಲ್ಲಿ ಹಾಡಹಗಲೇ 7.11 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ದರೋಡೆ ಪ್ರಕರಣದಲ್ಲಿ ಹೈದರಾಬಾದ್ ನ ಲಾಡ್ಜ್ ವೊಂದರಲ್ಲಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಹಣದ ಸಮೇತ ವಶಕ್ಕೆ ಪಡೆಯಲಾಗಿದೆ. ಆರೋಪಿಗಳಿಂದ 70 ಲಕ್ಷ ರೂಪಾಯಿ ಹಣ ಜಪ್ತಿ ಮಾಡಲಾಗಿದೆ.

ಬೆಂಗಳೂರು ದರೋಡೆ ಪ್ರಕರಣದಲ್ಲಿ ಪೊಲೀಸರು ಈ ವರೆಗೆ ಕಿಂಕ್ ಪಿನ್ ಕಾನ್ಸ್ ಟೇಬಲ್ ಸೇರಿದಂತೆ ಹಲವರನ್ನು ಬಂಧಿಸಿದ್ದಾರೆ. ಇದೀಗ ಮತ್ತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಈವರೆಗೆ 6.45 ಕೋಟಿ ಹಣ ರಿಕವರಿ ಮಾಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button