Latest

ದೇಶದಲ್ಲಿ ಮತ್ತೆ ಕೊರೊನಾ ಸ್ಫೋಟ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಮತ್ತೆ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 95,735 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 44 ಲಕ್ಷ ಗಡಿ ದಾಟಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಕಳೆದ 24 ಗಂಟೆಯಲ್ಲಿ 95,735 ಜನರಲ್ಲಿ ಕೊವಿಡ್ ವೈರಸ್ ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 44,65,864ಕ್ಕೆ ಏರಿಕೆಯಾಗಿದೆ.

Home add -Advt

ಕಲೆದ 24 ಗಂಟೆಯಲ್ಲಿ ದೇಶದಲ್ಲಿ ಮಹಾಮಾರಿಗೆ 1,172 ಜನರು ಬಲಿಯಾಗಿದ್ದಾರೆ. ಇದರಿಂದ ಇದೂವರೆಗೂ ಮಹಾಮಾರಿ ವೈರಸ್ ದೇಶದಲ್ಲಿ 75062 ಮಂದಿಯನ್ನು ಬಲಿಪಡೆದುಕೊಂಡಿದೆ.

44,65,864 ಮಂದಿ ಸೋಂಕಿತರ ಪೈಕಿ ದೇಶದಲ್ಲಿ 3471784 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿನ್ನೂ 919018 ಸಕ್ರಿಯ ಪ್ರಕರಣಗಳಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಒಂದೇ ದಿನದಲ್ಲಿ 11,29,756 ಜನರಿಗೆ ಕೊವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ಈ ವರೆಗೆ 5,29,34,433 ಜನರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂ ಆರ್ ಮಾಹಿತಿ ನೀಡಿದೆ.

Related Articles

Back to top button