Kannada NewsKarnataka NewsPolitics

*ಸಿಎಂ ಸಿದ್ದರಾಮಯ್ಯ ವಿರುದ್ಧ ಶಾಕಿಂಗ್ ಹೇಳಿಕೆ ನೀಡಿದ ಸಚಿವ ರಾಜಣ್ಣ*

ಪ್ರಗತಿವಾಹಿನಿ ಸುದ್ದಿ : ಸದ್ಯ ರಾಜ್ಯ ಕಾಂಗ್ರೆಸ್ ನಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ, ಸಿಎಂ ಬದಲಾವಣೆ ಮತ್ತು ಮಂತ್ರಿ ಮಂಡಳ ರಚನೆಯ ಬಗ್ಗೆ ಚರ್ಚೆ ನಡೆಯುತ್ತಿದೆ.‌ ಈ ಮಧ್ಯೆ ಸಹಕಾರ ಸಚಿವ ಸಿಎಂ ವಿರುದ್ಧ ಶಾಕಿಂಗ್ ಹೇಳಿಕೆ ನೀಡಿದ್ದಾರೆ.  

ಬೆಂಗಳೂರಿನಲ್ಲಿ ಮಾತನಾಡಿರುವ ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು, ಸಿಎಂ ಸಿದ್ದರಾಮಯ್ಯ ಆಡಳಿತದಲ್ಲಿ ತಮ್ಮ ಕಂಟ್ರೋಲ್ ಕಳೆದುಕೊಂಡಿದ್ದಾರೆ. ರಾಜ್ಯ ರಾಜಕೀಯದಲ್ಲಿ ದೊಡ್ಡ ಬದಲಾವಣೆ ಆಗಲಿದೆ ಎಂದು ಹೊಸ ಬಾಂಬ್‌ ಸಿಡಿಸಿದ್ದಾರೆ.

Home add -Advt

ರಾಜ್ಯದಲ್ಲಿ ಆಗಸ್ಟ್, ಸೆಪ್ಟೆಂಬರ್‌ನಲ್ಲಿ ರಾಜಕೀಯದಲ್ಲಿ ದೊಡ್ಡ ಬದಲಾವಣೆ ಆಗಲಿದೆ. ಬದಲಾವಣೆಯ ಗಾಳಿ ತಣ್ಣಗೆ ಬೀಸುತ್ತಿದೆ. ಸೆಪ್ಟೆಂಬರ್ ಮುಗಿಲಿ ಅದರ ಬಗ್ಗೆ ಹೇಳುವೆ ಎಂದಿದ್ದಾರೆ.

2013 ರಿಂದ 2018ವರೆಗೆ ಒಂದೇ ಪವರ್ ಸೆಂಟರ್ ಇತ್ತು. ಹಾಗಾಗಿ ಆಗ ಅವರಿಗೆ ಯಾವುದೇ ಒತ್ತಡ ಇರಲಿಲ್ಲ. ಈಗ ಬರೀ ಜಂಜಾಟಗಳಿಂದ ತುಂಬಿದೆ. ಸಿಎಂ ಸಿದ್ದರಾಮಯ್ಯ ಅವರು ಆಡಳಿತದಲ್ಲಿ ಕಂಟ್ರೋಲ್ ಕಳೆದುಕೊಂಡಿದ್ದಾರೆ. ಪವರ್ ಸೆಂಟರ್ ಗಳು ಜಾಸ್ತಿ ಆದರೆ ಪಕ್ಷಕ್ಕೆ ಒಳ್ಳೆಯದು. ಆಗ ಯಾರೂ ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಂಡು ಬೇರೆಯವರ ಮೇಲೆ ಹೇರಲು ಆಗುವುದಿಲ್ಲ ಎಂದು ಹೇಳಿದ್ದಾರೆ.

ಅಧ್ಯಕ್ಷ ಸ್ಥಾನವನ್ನ ಕೊಟ್ಟರೆ ನನಗೆ ಖುಷಿಯಾಗುತ್ತದೆ, ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಮತ್ತೆ ರಾಜ್ಯಾಧ್ಯಕ್ಷನಾಗುವ ಇಂಗಿತ ವ್ಯಕ್ತ ಪಡಿಸಿದ್ದಾರೆ.

Related Articles

Back to top button