Kannada NewsKarnataka NewsNationalPolitics

*ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಿಎಂ : ಅವರಿಗೆ ಆಗಿದ್ದೇನು..?*

ಪ್ರಗತಿವಾಹಿನಿ ಸುದ್ದಿ: ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದರು.

ತಪಾಸಣೆ ನಡೆಸಿದ ವೈದ್ಯರು ಈ ಹಿಂದೆ ಲೆಗಮೆಂಟ್ ಶಸ್ತ್ರ ಚಿಕಿತ್ಸೆ ನಡೆದ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ. 

Home add -Advt

ಎರಡು ದಿನ ಪ್ರಯಾಣ ಮಾಡದೆ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಬಳಿಕ ಸಿದ್ದರಾಮಯ್ಯ ಅವರು ಡಿಸ್ಚಾರ್ಜ್ ಆಗಿದ್ದಾರೆ.‌

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

Related Articles

Back to top button