Kannada NewsKarnataka NewsLatest

*ಹಾಸ್ಟೇಲ್ ಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ; ಇಬ್ಬರು ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಭಟ್ಕಳ: ಕುಡುಕರ ಜೊತೆ ಕೀಟಲೆ ಮಾಡಿದ್ದಕ್ಕೆ ವಿದ್ಯಾರ್ಥಿಗಳನ್ನು ಅಟ್ಟಾಡಿಸಿಕೊಂಡು ಬಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ.

Home add -Advt

ಅಲ್ಪಸಂಖ್ಯಾತ ಮೆಟ್ರಿಕ್ ನಂತರದ ಭಟ್ಕಳ ಹಾಸ್ಟೇಲ್ ವಿದ್ಯಾರ್ಥಿಗಳು ಕುಡುಕರನ್ನು ಕೀಟಲೆ ಮಾಡಿದ್ದಾರೆ ಎನ್ನಲಾಗಿದೆ. ಇದರಿಂದ ಕೋಪಗೊಂಡ ಇಬ್ಬರು ದೊಣ್ಣೆ, ಬ್ಯಾಟ್ ಹಿಡಿದು ಬಂದಿದ್ದಾರೆ. ಹಾಸ್ಟೇಲ್ ಮೇಲೆ ದಾಳಿ ನಡೆಸಿ ಬಾಗಿಲು, ಕಿಟಕಿ ಮುರಿದಿದ್ದಾರೆ. ಸಿಕ್ಕ ಸಿಕ್ಕ ವಿದ್ಯಾರ್ಥಿಗಳನ್ನು ಮನಬಂದಂತೆ ಥಳಿಸಿದ್ದಾರೆ.

ಇಂಜಿನಿಯರ್ ವಿದ್ಯಾರ್ಥಿ ನವೀದ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆ. ಘಟನೆ ಸಂಬಂಧ ಭಟ್ಕಳ ಶಹರ ಠಾಣೆ ಪೊಲೀಸರು ರಾಘವೇಂದ್ರ ಹಾಗೂ ನಂದನ್ ಎಂಬುವವರನ್ನು ಬಂಧಿಸಿದ್ದಾರೆ.


Related Articles

Back to top button