Belagavi NewsBelgaum NewsKannada NewsKarnataka News

*8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಬೆಳಗಾವಿ ಪೊಲೀಸರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಪೊಲೀಸರು ಕಾರ್ಯಚರಣೆ ನಡೆಸುವ ಮೂಲಕ ಮೊಬೈಲ್ ಕಳ್ಳತನ ಪ್ರಕರಣದಲ್ಲಿ 8 ಜನ ಆರೋಪಿಗಳನ್ನು ಬಂಧಿಸಿ, 40 ಮೋಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ. 

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ​ಕುಟಕೋಳ ಪೋಲಿಸ್ ಠಾಣೆಯಲ್ಲಿ ದಾಖಲಾದ ಕಳ್ಳತನ ಪ್ರಕರಣ ತನಿಖೆ ನಡೆಸಿದ ಪೊಲೀಸರು, ಆರೋಪಿಗಳಿಂದ ಒಟ್ಟು 1 ಲಕ್ಷ ,34, ಸಾವಿರದ 200 ರೂಪಾಯಿ ಮೌಲ್ಯದ ವಸ್ತುಗಳು ವಶ ಪಡೆದಿದ್ದಾರೆ. 

ವಿವಿಧ ಕಂಪನಿಗಳ 4, ಲಕ್ಷ 94, ಸಾವಿರದ 200 ರೂಪಾಯಿ ಮೌಲ್ಯದ 40 ಮೊಬೈಲ್ ಫೋನ್‌ಗಳು ಜಪ್ತಿ ಮಾಡಲಾಗಿದೆ. ಕೃತ್ಯಕ್ಕೆ ಬಳಸಿದ್ದ 5, ಲಕ್ಷ 40, ಸಾವಿರ ಮೌಲ್ಯದ ಎರಡು ಕಾರುಗಳನ್ನು ವಶಪಡಿಸಿಕೊಳ್ಳಾಗಿದೆ.

ಬೆಳಗಾವಿ ಜಿಲ್ಲಾ ಎಸ್‌ಪಿ ಕೆ ರಾಮರಾಜನ್ ಹಾಗೂ ಹಿರಿಯ ಅಧಿಕಾರಿಗಳು ಕಟಕೋಳ ಪೊಲೀಸರ ಕಾರ್ಯಾಚರಣೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button