Kannada NewsKarnataka NewsLatest

*ಆಸ್ತಿ ವಿವರ ಸಲ್ಲಿಸದ ಸಚಿವರು, ಶಾಸಕರ ಹೆಸರು ಪ್ರಕಟಿಸಿದ ಲೋಕಾಯುಕ್ತ*

ಪ್ರಗತಿವಾಹಿನಿ ಸುದ್ದಿ: ಆಸ್ತಿ ವಿವರಗಳನ್ನು ಸಲ್ಲಿಸದ ಸಚಿವರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರ ಹೆಸರುಗಳನ್ನು ಕರ್ನಾಟಕ ಲೋಕಾಯುಕ್ತ ಪ್ರಕಟಿಸಿದೆ.

ಐವರು ಸಚಿವರು, 67 ಶಾಸಕರು ಹಾಗೂ ವಿಧಾನ ಪರಿಷತ್ ನ 28 ಸದಸ್ಯರು ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸಿಲ್ಲ. ಸಚಿವರಾದ ಕೆ.ಹೆಚ್.ಮುನಿಯಪ್ಪ, ದಿನೇಶ್ ಗುಂಡೂರಾವ್, ಜಮೀರ್ ಅಹ್ಮದ್ ಖಾನ್, ಯು.ಬಿ.ವೆಂಕಟೇಶ್ ಹಾಗೂ ರಹೀಂ ಖಾನ್ ಆಸ್ತಿ ವಿವರ ಸಲ್ಲಿಸಿಲ್ಲ.

Home add -Advt

ಕರ್ನಾಟಕ ಲೋಕಾಯುಕ್ತ ಕಾಯ್ದೆ ಪ್ರಕಾರ ಪ್ರತಿ ವರ್ಷ ಜೂನ್ 30ರ ಮೊದಲು ಜನಪ್ರತಿನಿಧಿಗಳು ತಮ್ಮ ಆಸ್ತಿ ವಿವರಗಳನ್ನು ಸಲ್ಲಿಸಬೇಕು.

Related Articles

Back to top button